ಬೆಂಗಳೂರು, ಜೂ 11 (Daijiworld News/MSP): ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡು ಐಎಂಎ ಜ್ಯುವೆಲ್ಲರ್ಸ್ ವಂಚನೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯ ಜವಾಬ್ದಾರಿಯನ್ನ ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಗೃಹ ಸಚಿವರಾದ ಎಂ.ಬಿ ಪಾಟಿಲ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು. ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಅಂತಾ ಭರವಸೆ ನೀಡಿದ್ದಾರೆ.
ಐಎಂಎ ಜ್ಯುವೆಲ್ಲರ್ಸ್ ವಿರುದ್ದ ಇಲ್ಲಿಯವರೆಗೆ ಸುಮಾರು 3,500 ಮಂದಿ ತಮಗೆ ವಂಚನೆಯಾಗಿದೆ ಎಂದು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.