ಬೆಂಗಳೂರು, ಜೂ 11 (Daijiworld News/SM): ರೈತರ ಸಾಲಮನ್ನಾ ಹಣ ವಾಪಸ್ ಹೋಗಿರುವ ವಿಚಾರ ರೈತರಿಗೆ ಮೋಸ ಮಾಡಿದಂತಾಗಿದೆ. 49 ಸಾವಿರ ಕೋಟಿ ರೂಪಾಯಿ ಸಾಲಮನ್ನಾ ಮಾಡುತ್ತೇನೆ ಎಂದು ಚುನಾವಣಾ ಸಮಯದಲ್ಲಿ ಹೇಳಿದ್ದ ಸಿಎಂ ಈ ಸಂಬಂಧ ಅಧಿಕಾರಿಗಳ ಸಭೆ ಸಹ ನಡೆಸಿದ್ದರು. ಆದರೆ ಚುನಾವಣೆ ಮುಗಿದ ಮೇಲೆ ಹಣ ವಾಪಸ್ ಪಡೆಯೋದು ಅರ್ಥ ಹೀನ ವಿಚಾರವಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ವಿಚಾರದಲ್ಲಿ ಇಬ್ಬಗೆಯ ನೀತಿಯನ್ನು ಅನುಸರಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಇನ್ನು ಒಂದು ವರ್ಷದ ಹಿಂದೆಯೇ ಕೇರಳದ ನಮ್ಮ ಕಾರ್ಯಕರ್ತರೊಬ್ಬರು ಪಿಎಫ್ಐಗೆ ಐಎಂಎ ಮೂಲಕ ಹಣಕಾಸು ರವಾನೆ ಆಗುತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ನನಗೆ ಗೊತ್ತಿರುವ ಕೆಲವರಿಗೆ ಜಾಗೃತಿ ಮೂಡಿಸಿದ್ದೆ. ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಜೊತೆ ಮನ್ಸೂರ್ ಖಾನ್ ನಂಟಿತ್ತು ಎನ್ನುವ ಮಾತು ಕೇಳಿ ಬಂದಿತ್ತು ಎಂದರು.