ಬೆಂಗಳೂರು, ಜೂ12(Daijiworld News/SS): ಭ್ರಷ್ಟಾಚಾರ ತಡೆ ವಿಭಾಗದ ಅಧಿಕಾರಿಗಳು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಭ್ರಷ್ಟ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಕರ್ನಾಟಕ ಯೂನಿವರ್ಸಿಟಿಯ ಪ್ರೊಫೆಸರ್ ಕಲ್ಲಪ್ಪ ಎಂ ಹೊಸಮೈ ಅವರ ನಿವಾಸ, ಮಂಗಳೂರಿನ ಗಣಿ ಮತ್ತು ಭೂಗರ್ಭ ಇಲಾಖೆಯ ಅಧಿಕಾರಿ ಮಹದೇವಪ್ಪ ಹಾಗೂ ಉತ್ತರ ಕನ್ನಡದ ಜೊಯ್ಡಾದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಕಾರಿ ಎಂಜಿನಿಯರ್ ಉದಯ್ ಡಿ ಚಬ್ಬಿ ಅವರ ನಿವಾಸ ಮತ್ತು ಕಚೇರಿಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಮಂಗಳೂರಿನಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಎಇ ಮಹದೇವಪ್ಪ ಮನೆಗೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡ, ಬೆಳಗಾವಿ ಮತ್ತು ದಾಂಡೇಲಿ ಹಾಗೂ ಇನ್ನೂ ಎರಡು ಕಡೆಗಳಲ್ಲಿ ದಾಳಿ ಮುಂದುವರಿದಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.