ನವದೆಹಲಿ, ಜೂ 12 (Daijiworld News/SM): ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಟ್ವಿಟ್ಟರ್ ಹಾಗೂ ಫೇಸ್ ಬುಕ್ ನಲ್ಲಿ ಷೇರ್ ಮಾಡಿದ ಆರೋಪ ಅವರ ಮೇಲೆ ಬಂಧಿಸಲ್ಪಟ್ಟಿದ್ದ ಪತ್ರಕರ್ತನನ್ನು ಬಿಡುಗಡೆ ಮಾಡಲಾಗಿದೆ.ಸುಪ್ರೀಂ ಆದೇಶದ ಮರುದಿನವೇ ಪತ್ರಕರ್ತನ ಬಿಡುಗಡೆಯಾಗಿದೆ.
ಸುಪ್ರೀಂ ಕೋರ್ಟ್ ತಕ್ಷಣ ಬಿಡುಗಡೆ ಮಾಡುವಂತೆ ಆದೇಶ ನೀಡಿದ ಒಂದು ದಿನ ಆದ ಮೇಲೆ, ಬುಧವಾರದಂದು ದೆಹಲಿ ಮೂಲದ ಪತ್ರಕರ್ತ ಇಪ್ಪತ್ತಾರು ವರ್ಷದ ಪ್ರಶಾಂತ್ ಕನೋಜಿಯಾ ಅವರನ್ನು ಗೋಸಾಯ್ ಗಂಜ್ ನಲ್ಲಿರುವ ಲಖನೌ ಜಿಲ್ಲಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ವೈಯಕ್ತಿಕ ಶ್ಯೂರಿಟಿ ಆಧಾರದಲ್ಲಿ ಸ್ಥಳೀಯ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಟ್ವಿಟ್ಟರ್ ಹಾಗೂ ಫೇಸ್ ಬುಕ್ ನಲ್ಲಿ ಷೇರ್ ಮಾಡಿರುವ ಆರೋಪ ಅವರ ಮೇಲಿದೆ. ಈ ಹಿನ್ನೆಲೆ ಬಂಧಿಸಲಾಗಿತ್ತು. ಅವರನ್ನು ಬಿಡುಗಡೆ ಮಾಡಬೇಕೆಂದು ಹಲವರು ಒತ್ತಾಯಿಸಿದ್ದರು. ಮಾತ್ರವಲ್ಲದೆ ಸುಪ್ರೀಂ ಮೆಟ್ಟಿಲೇರಿದ್ದರು. ಅದರಂಟೆ ಸುಪ್ರೀಂ ಕೋರ್ಟ್ ಸಮಗ್ರ ಮಾಹಿತಿ ಸಂಗ್ರಹಿಸಿದ ಬಳಿಕ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಪತ್ರಕರ್ತನನ್ನು ಬಿಡುಗಡೆಗೊಳಿಸಲಾಗಿದೆ.