ಬೆಂಗಳೂರು, ಜೂ13(Daijiworld News/SS): ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.
ಬೆಂಗಳೂರು ಹಾಗೂ ನವದೆಹಲಿಯಲ್ಲಿ ತಮಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ಪ್ರಕರಣದ ವಿಚಾರಣೆ ಕೈಬಿಡಬೇಕು ಎಂದು ಕೋರಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಇತರ ನಾಲ್ವರು ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ತೀರ್ಪನ್ನು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತೀರ್ಪನ್ನು ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.
ಕಳೆದ ಮಾರ್ಚ್ ತಿಂಗಳಿನಲ್ಲಿ ಸಚಿವ ಡಿ.ಕೆ ಶಿವಕುಮಾರ್ ದೆಹಲಿಯ ಫ್ಲ್ಯಾಟ್ಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಬಳಿಕ ಐಟಿ ದಾಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ ನನ್ನನ್ನು ಕೈಬಿಡಬೇಕು' ಎಂದು ಕೋರಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದೀಗ ಡಿ.ಕೆ.ಶಿವಕುಮಾರ್, ಎನ್.ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ತೀರ್ಪನ್ನು ಕಾಯ್ದಿರಿಸಿದ್ದು, ಜೂನ್ 25ಕ್ಕೆ ತೀರ್ಪು ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಿಂದ ದೆಹಲಿಗೆ ಕಾನೂನುಬಾಹಿರವಾಗಿ ಹಣ ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು 2017ರ ಆಗಸ್ಟ್ 2ರಂದು ಡಿ.ಕೆ.ಶಿವಕುಮಾರ್ಗೆ ಸೇರಿದ ಬೆಂಗಳೂರು ಮತ್ತು ನವದೆಹಲಿಯ ಮನೆಗಳ ಮೇಲೆ ದಾಳಿ ನಡೆಸಿ 8.59 ಕೋಟಿ ನಗದನ್ನು ಜಪ್ತಿ ಮಾಡಿದ್ದರು.