ಮೈಸೂರು, ಜೂ13(Daijiworld News/SS): ನರೇಂದ್ರ ಮೋದಿ ಒಬ್ಬನೇ ದೇಶಭಕ್ತ, ಅವನಿಂದಲೇ ದೇಶ ಉಳಿಯುವುದು ಎಂದು ಜನರಲ್ಲಿ ಬಿಂಬಿಸಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 5 ವರ್ಷದ ಸರ್ಕಾರದ ಆಡಳಿತದ ಸಮಯದಲ್ಲಿ ರೈತರ, ನಿರುದ್ಯೋಗಿಗಳ ಸಮಸ್ಯೆ ಬಗೆಹರಿದಿಲ್ಲ. ಇನ್ನೂ ದೇಶದ ಆರ್ಥಿಕ ಮಟ್ಟವೂ ಕುಸಿದಿದೆ. ಆದರೆ ಈ ಬಗ್ಗೆ ನಾನು ಸತ್ಯ ಹೇಳಲಾಗದಂತಹ ಪರಿಸ್ಥಿತಿಯಲ್ಲಿದ್ದೇನೆ. 5 ವರ್ಷದ ಪ್ರಧಾನಿ ಮೋದಿ ಅವರ ಸರ್ಕಾರವನ್ನು ದೇಶದ ಜನರು ಹಾಡಿ ಹೊಗಳಿದ್ದಾರೆ. ಆದರೆ ಜಿಡಿಪಿ ಐದು ವರ್ಷದಲ್ಲಿ ಪಾತಾಳಕ್ಕೆ ಹೋಗಿದೆ ಎಂದು ಟೀಕಿಸಿದರು.
ದೇಶದಲ್ಲಿ ನಿರುದ್ಯೋಗ ಸಮಸ್ಯೆ, ರೂಪಾಯಿ ಮೌಲ್ಯ ಕುಸಿದಿದೆ. ಆದರೆ ಮೋದಿ ಮೋದಿ ಎನ್ನುತ್ತಾರೆ. ಐದು ವರ್ಷದಲ್ಲಿ ದೇಶದ ಆರ್ಥಿಕ ಪರಿಸ್ಥಿಯನ್ನು ಸುಧಾರಿಸಿಲ್ಲ. ಬರೀ ಭಾಷಣ, ಸುಳ್ಳು, ನಾಟಕ ಇವುಗಳಿಂದ ಕಾಲಕಳೆದಿದ್ದಾರೆ ಎಂದು ಹೇಳಿದರು.
ದೇಶದ ನೋಡಿ ದೇಶದ ಜಿಡಿಪಿ ಎಷ್ಟು ಕುಸಿದಿದೆ. ನರೇಂದ್ರ ಮೋದಿ ಒಬ್ಬನೇ ದೇಶಭಕ್ತ. ಅವನಿಂದಲೇ ದೇಶ ಉಳಿಯುವುದು ಎಂದು ಜನರಲ್ಲಿ ಬಿಂಬಿಸಲಾಗಿದೆ. ಸತ್ಯ ಹೇಳಲಾಗದಂತ ಕಷ್ಟದ ಪರಿಸ್ಥಿತಿಯಲ್ಲಿದ್ದೇವೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿಚಾರದಲ್ಲಿ ಸತ್ಯ ಹೇಳುವಂತಿಲ್ಲ. ಪುಲ್ವಾಮಾ ಘಟನೆ ಬಗ್ಗೆ ಪ್ರಶ್ನೆ ಕೇಳುವಂತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ದೇಶದ ಪರಿಸ್ಥಿತಿಯ ಬಗ್ಗೆ ನಾವು ಪ್ರಶ್ನೆ ಮಾಡಬಾರದಾ..? ಸಂವಿಧಾನದಲ್ಲಿ ನಮಗೆ ಪ್ರಶ್ನೆ ಮಾಡುವ ಹಕ್ಕಿಲ್ಲವೇ..? ಎಂದು ಪ್ರಶ್ನಿಸಿದರು.