ಬೆಂಗಳೂರು, ಜೂ 13 (Daijiworld News/SM): ರಾಜ್ಯದಲ್ಲಿ ಆಡಳಿತದಲ್ಲಿರುವ ದೋಸ್ತಿ ಸರಕಾರ ಹೆಚ್ಚು ಸಮಯ ಅಧಿಕಾರದಲ್ಲಿ ಉಳಿಯುವ ಸಾಧ್ಯತೆ ಕಡಿಮೆ. ಶೀಘ್ರದಲ್ಲೇ ರಾಜ್ಯದ ಜನತೆ ಮತ್ತೊಂದು ಚುನಾವಣೆಯನ್ನು ಕಾಣಲಿದ್ದಾರೆ ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಭವಿಷ್ಯ ನುಡಿದಿದ್ದಾರೆ.
ಖಂಡಿತವಾಗಿ ಮಧ್ಯಂತರ ಚುನಾವಣೆ ರಾಜ್ಯದಲ್ಲಿ ಎದುರಾಗಲಿದೆ. ಹೈಕಮಾಂಡ್ ಜೊತೆ ಚುನಾವಣೆಯ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಯಾವುದಕ್ಕೂ ಕಾಲವೇ ಉತ್ತರಿಸಲಿದೆ ಎಂದರು.
ಇನ್ನು ಮಧ್ಯಂತರ ಚುನಾವಣೆ ನಡೆದರೆ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದಲ್ಲಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಬೇಕೋ ಬೇಡವೋ ಎಂಬುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.