ಬೆಂಗಳೂರು, ಫೆ.27(DaijiworldNews/AK):ಬೆಂಗಳೂರಿನ ಅರಮನೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ಒಪ್ಪದ ಸುಪ್ರೀಂಕೋರ್ಟ್ ಟಿಡಿಆರ್ ಅನ್ನು ತನ್ನ ಸುಪರ್ದಿಗೆ ನೀಡುವಂತೆ ಹೇಳಿದೆ.

10 ದಿನಗಳ ಒಳಗಾಗಿ ಸುಪ್ರೀಂಕೋರ್ಟ್ ಗೆ ಟಿಡಿಆರ್ ಪ್ರಮಾಣಪತ್ರವನ್ನು ಸರ್ಕಾರ ನೀಡಬೇಕಾಗಿದೆ. ಬಳ್ಳಾರಿ ರಸ್ತೆ ಹಾಗೂ ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗ ಬಳಕೆಗೆ ಬರೋಬ್ಬರಿ 3400 ಕೋಟಿ ರೂ. ಮೊತ್ತದ ಟಿಡಿಆರ್ ಪರಿಹಾರ ನೀಡಲು ನ್ಯಾಯಾಲಯ ಆದೇಶ ನೀಡಿತ್ತು.
ಜ.23ರಂದು ತುರ್ತು ಸಚಿವ ಸಂಪುಟ ಸಭೆ ನಡೆಸಿದ್ದ ರಾಜ್ಯ ಸರ್ಕಾರ ರಸ್ತೆ ಅಗಲೀಕರಣ ಪ್ರಸ್ತಾಪವನ್ನೇ ಕೈಬಿಟ್ಟು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು.