ನವದೆಹಲಿ, ಮಾ, (DaijiworldNews/AK):ಉತ್ತರಾಖಂಡ್ನ ಚಮೋಲಿಯಲ್ಲಿ ಹಿಮಸ್ಫೋಟದಿಂದಾಗಿ ಕಾಮಗಾರಿ ನಡೆಸುತ್ತಿದ್ದ 57ಕ್ಕೂ ಹೆಚ್ಚು ಬಾರ್ಡರ್ ರೋಡ್ ಆರ್ಗನೈಸೇಷನ್ ಕಾರ್ಮಿಕರು ಸಿಲುಕಿದ್ದು ಇಲ್ಲಿಯವರೆಗೆ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ರಕ್ಷಣೆ ಮಾಡಲಾದ ಕಾರ್ಮಿಕರನ್ನು ಹೆಲಿಕಾಪ್ಟರ್ ಮೂಲಕ ಜೋಶಿ ಮಠದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಮದಡಿ ಸಿಲುಕಿರುವ ಉಳಿದ ಕಾರ್ಮಿಕರ ರಕ್ಷಣೆಗೆ ಸೇನಾ ಕಾರ್ಯಾಚರಣೆ ಮುಂದುವರಿದಿದೆ.
ಈ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಜೊತೆಗೆ ಅಗತ್ಯ ನೆರವಿನ ಭರವಸೆಯನ್ನೂ ನೀಡಿದ್ದಾರೆ.