ಬೆಂಗಳೂರು, ಮಾ.01(DaijiworldNews/TA): ಬಿಜೆಪಿ ಸರ್ಕಾರ ಹೊಸ 9 ವಿಶ್ವವಿದ್ಯಾಲಯಗಳನ್ನು ನೀಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ಕಿತ್ತುಕೊಂಡಿದೆ. ವಿವಿಗಳನ್ನು ಮುಚ್ಚಲು ರೂಪಿಸಿದ ವರದಿಯಲ್ಲಿ ವಿವಿಗಳು ಲಾಭದಾಯಕವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರದ ಉದ್ದೇಶ, ಶಿಕ್ಷಣವೆಂದರೆ ವ್ಯಾಪಾರವಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ವಿಶ್ವವಿದ್ಯಾಲಯಗಳಿಂದ ಲಾಭ ಬರುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿದೆ ಎಂದಿರುವ ಕಾಂಗ್ರೆಸ್ ಸರ್ಕಾರ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ. ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರದ ಉದ್ದೇಶ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಿಕ್ಷೆ ಬೇಡುತ್ತಿದ್ದಾರೆ.
ಈ ಬಾರಿ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಹಿಂದಿನ ಎಲ್ಲಾ ಮುಖ್ಯಮಂತ್ರಿಗಳಿಗೆ ಹೋಲಿಸಿದರೆ ಸಿದ್ದರಾಮಯ್ಯ ಅವರೇ ಅತ್ಯಧಿಕ ಸಾಲ ಮಾಡಿದ್ದಾರೆ ಎಂಬುವುದಾಗಿ ಕೈನಾಯಕರ ವಿರುದ್ಧ ಕಿಡಿ ಕಾರಿದರು.