ನವದೆಹಲಿ, ಮಾ.02(DaijiworldNews/TA) : ಹರಿಯಾಣದ ರೋಹ್ಟಕ್ನಲ್ಲಿ 22 ವರ್ಷದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಶವ ಸೂಟ್ಕೇಸ್ನಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕಾಂಗ್ರೆಸ್ ಉನ್ನತ ತನಿಖೆಗೆ ಆಗ್ರಹಿಸಿದೆ. ಇದೀಗ ಈ ಪ್ರಕರಣ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ರೋಹ್ಟಕ್ನಲ್ಲಿ ಮಹಿಳೆಯ ಸಾವಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

"ಈ ರೀತಿ ಸೂಟ್ಕೇಸ್ನಲ್ಲಿ ಶವ ಪತ್ತೆಯಾಗಿರುವುದು ಅತ್ಯಂತ ದುಃಖಕರ ಮತ್ತು ಆಘಾತಕಾರಿ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಒಂದು ಕಪ್ಪು ಚುಕ್ಕೆ. ಈ ಇಡೀ ಪ್ರಕರಣದ ಬಗ್ಗೆ ಉನ್ನತ ಮಟ್ಟದ, ನಿಷ್ಪಕ್ಷಪಾತ ತನಿಖೆ ನಡೆಯಬೇಕು ಮತ್ತು ಅಪರಾಧಿಗಳಿಗೆ ಸಾಧ್ಯವಾದಷ್ಟು ಬೇಗ ಕಠಿಣ ಶಿಕ್ಷೆ ವಿಧಿಸಬೇಕು" ಎಂದು ಹೂಡಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ದುರಂತ ಘಟನೆಯು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ "ಸಂಪೂರ್ಣವಾಗಿ ಕುಸಿದಿದೆ" ಎಂಬುದನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.