ಬೆಂಗಳೂರು, ಮಾ.03(DaijiworldNews/AK): ಸಾಲ ವಸೂಲಾತಿಯಲ್ಲಿ ಕಿರುಕುಳ ಘಟನೆ ಬೆಳಕಿಗೆ ಬಂದಿದೆ. ಇದನ್ನು ತಡೆಯಲು ಸುಗ್ರೀವಾಜ್ಞೆಯನ್ನು ಸರ್ಕಾರ ತಂದಿದೆ. ಕನಿಷ್ಠ 6 ತಿಂಗಳಿನಿಂದ ಗರಿಷ್ಠ 10 ವರ್ಷಗಳವರೆಗೆ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ. ಕಿರು ಸಾಲ ವಸೂಲಾತಿ ಕಿರುಕುಳ ತಡೆಯಲು ಶಾಸನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ವಿಧಾನಮಂಡಲ ಉಭಯ ಸದನ ಉದ್ದೇಶಿಸಿ ಮಾತನಾಡಿದ ಅವರು, ಕಳೆದ 19 ತಿಂಗಳಲ್ಲಿ ಗಂಭೀರ ಕಾನೂನು ಸುವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಪೊಲೀಸರು ಅಪರಾಧಿಗಳನ್ನು ಶೀಘ್ರ ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅಪರಾಧ ಪ್ರಕರಣಗಳು ಇಳಿಕೆಯಾಗಿದೆ ಎಂದರು.
ಗ್ಯಾರಂಟಿಯಿಂದ ರಾಜ್ಯ ದಿವಾಳಿ ಆಗುತ್ತೆ ಎಂದು ಹೇಳುತ್ತಿದ್ದರು. ಎಲ್ಲ ಆರೋಪಗಳು ಸುಳ್ಳು ಎಂದು ಸರ್ಕಾರ ಸಾಬೀತು ಮಾಡಿದೆ. ಸರ್ಕಾರ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯನ್ನು ತಲುಪಿಸಿದೆ. ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ. ಕೆಎಂಎಫ್ನಿಂದ ಅತಿ ಹೆಚ್ಚು ಹಾಲು ಸಂಗ್ರಹವಾಗುತ್ತಿದೆ ಎಂದು ಹೇಳಿದರು.