ಬೆಂಗಳೂರು, ಮಾ.03(DaijiworldNews/AK):ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

ಡಿಕೆ ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ ಯಾರಿಂದಕೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆ ಕುರಿತು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು , ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ.
ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಮೊಯ್ಲಿ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ. ನಾನು ಕಾರ್ಯಕರ್ತರ ಸಭೆ ಮಾಡಲು ಹೋಗಿದ್ದೆ. ಮಲ್ಲಿಕಾರ್ಜುನ ಖರ್ಗೆ ಅವರು ಮಾತಾಡಬಾರದು ಅಂತ ಹೇಳಿದ್ದಾರೆ. ಅದಕ್ಕೆ ಬದ್ದವಾಗಿದ್ದೇನೆ ಎಂದು ತಿಳಿಸಿದರು.