ಬೆಂಗಳೂರು, ಮಾ.04(DaijiworldNews/AK):ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ಆರ್ಥಿಕ ಅಪರಾಧಗಳ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಗೋಲ್ಡ್ ಸ್ಮಗ್ಲಿಂಗ್ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಏರ್ಪೋರ್ಟ್ನಲ್ಲಿ ಬಂಧಿಸಲಾಗಿದೆ. ಸೋಮವಾರ ರಾತ್ರಿ ದೆಹಲಿಯಿಂದ ಬಂದಿಳಿದ ನಟಿ ರನ್ಯಾ ರಾವ್ ಬಳಿ 12 ಕೋಟಿ ಮೌಲ್ಯದ 14.8 ಕೆಜಿ ಚಿನ್ನ ಪತ್ತೆಯಾಗಿದೆ.
ಬ್ಯುಸಿನೆಸ್ ಮೇಲೆ ದುಬೈ ಹೋಗಿ ಬರುತ್ತಿದ್ದ ನಟಿ ರನ್ಯಾರಾವ್ ಮೇಲೆ ಡಿಆರ್ಐ ಅಧಿಕಾರಿಗಳು ನಿಗಾ ವಹಿಸಿದ್ದರು. ಕಳ್ಳಸಾಗಣೆಯಾದ ಚಿನ್ನವನ್ನು ನಟಿ ರನ್ಯಾರಾವ್ ದೆಹಲಿಯಿಂದ ಬೆಂಗಳೂರಿಗೆ ತರುತ್ತಿರುವ ಬಗ್ಗೆ ಡಿಆರ್ಐ ಅಧಿಕಾರಿಗಳಿಗೆ ಖಚಿತ ಮಾಹಿತಿ ಸಿಕ್ಕಿ ಕಾರ್ಯಚರಣೆ ನಡೆಸಿದ ಡಿಆರ್ಐ ಅಧಿಕಾರಿಗಳು ನಟಿ ರನ್ಯಾರಾವ್ರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ನಟಿ ರನ್ಯಾರಾವ್ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಮಲಮಗಳು. ಹೀಗಾಗಿ ಆಕೆಗೆ ಎಸ್ಕಾರ್ಟ್ ಕೊಡಲು ಬಂದಿದ್ದ ಪೊಲೀಸರನ್ನು ಮತ್ತು ರನ್ಯಾರಾವ್ ಪತಿಯನ್ನು ಸ್ಮಗ್ಲಿಂಗ್ಗೆ ನೆರವು ನೀಡುತ್ತಿದ್ದ ಆರೋಪದ ಮೇರೆಗೆ ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.