ಚೆನ್ನೈ,ಮಾ.08(DaijiworldNews/AK): ದಕ್ಷಿಣದ ಸೂಪರ್ಸ್ಟಾರ್ ದಳಪತಿ ವಿಜಯ್ ಅವರು ಸಿನಿಮಾ ಹಾಗೂ ರಾಜಕೀಯ ಕೆಲಸಗಳ ನಿರ್ವಹಣೆಯಲ್ಲಿ ಬ್ಯುಸಿಯಾಗಿದ್ದಾರೆ.

ಶುಕ್ರವಾರ ವಿಜಯ್ ಅವರು ಚೆನ್ನೈನಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಭಾಗಿ ಆಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಭಿಮಾನಿಗಳು ವಿಜಯ್ ಅವರನ್ನು ಹೊಗಳಿದರೆ, ವಿರೋಧಿಗಳು ಅವರ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.
ದಳಪತಿ ವಿಜಯ್ ಅವರು 2026ರ ತಮಿಳುನಾಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ಸ್ಥಾಪನೆ ಮಾಡಿದ್ದಾರೆ. ವಿಜಯ್ ಅವರು ತಲೆಗೆ ಟೋಪಿ ಹಾಕಿ ಇಫ್ತಾರಿ ಕೂಟದಲ್ಲಿ ಭಾಗಿ ಆಗಿದ್ದಾರೆ. ಅವರು ಮುಸ್ಲಿಂ ಸಂಪ್ರದಾಯದಂತೆ ನಡೆದುಕೊಂಡಿದ್ದಾರೆ.
ಅವರ ಅಭಿಮಾನಿಗಳು ಇದನ್ನು ಹೊಗಳಿದ್ದಾರೆ. ಎಲ್ಲಾ ಧರ್ಮವನ್ನು ವಿಜಯ್ ಗೌರವಿಸುತ್ತಿದ್ದಾರೆ ಎಂದು ಸಂತಸ ಹೊರಹಾಕಿದ್ದಾರೆ. ಆದರೆ, ಅವರ ವಿರೋಧಿಗಳು ವೋಟ್ ಬ್ಯಾಂಕ್ ರಾಜಕೀಯ ಎಂದು ಟೀಕಿಸಿದ್ದಾರೆ.