ಚೆನ್ನೈ,ಮಾ.08(DaijiworldNews/AK):ತಮಿಳುನಾಡಿನಲ್ಲಿ ಓದುತ್ತಿರುವ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ ಎಂದು ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ ಆತಂಕ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ತಮಿಳುನಾಡಿನಲ್ಲಿ ಓದುತ್ತಿರುವ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ. ಹಾಗಾಗಿ ನಿಜವಾದ ಮಹಿಳಾ ದಿನಾಚರಣೆಯು ಡಿಎಂಕೆ ಸರ್ಕಾರವನ್ನು ಬೇರುಸಹಿತ ಕಿತ್ತೊಗೆದು 2026 ರಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಜಾರಿಗೆ ತಂದಾಗ ಸಾರ್ಥಕವಾಗುತ್ತದೆ ಎಂದು ಹೇಳಿದ್ದಾರೆ.
ಲೋಕಸಭೆ ಕ್ಷೇತ್ರ ಪುನರ್ವಿಂಗಡಣೆ ಕುರಿತು ಮಾತನಾಡಿ, ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತಮ್ಮ ವೈಫಲ್ಯಗಳನ್ನು ಮರೆಮಾಚಲು ಈ ವಿಷಯವನ್ನು ದೊಡ್ಡದು ಮಾಡುತ್ತಿದ್ದಾರೆ. ಜನರು ಈಗ ತ್ರಿಭಾಷಾ ನೀತಿಯನ್ನು ಬಯಸುತ್ತಾರೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.