ಬೆಂಗಳೂರು,ಜೂ14(Daijiworldnews/AZM): ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ ಗ್ರಾಮೀಣಾಬಿವೃದ್ಧಿ ಸಚಿವರಾದ ಶ್ರೀ ಕೃಷ್ಣಭೈರೇಗೌಡ ಅವರು ಈ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಲ್ಯಾಪ್ ಟಾಪ್ ಕೊಡುವ ಬಗ್ಗೆ ಈ ಹಿಂದೆ ಘೋಷಣೆಯಾಗಿತ್ತು. ಆದರೆ ನಾನಾ ಕಾರಣಗಳಿಂದ ಈ ಯೋಜನೆ ವಿಳಂಬವಾಗಿತ್ತು, ಆದರೆ ಇಂದು ಸಚಿವ ಸಂಪುಟ ಸಭೆ ಇದಕ್ಕೆ ಒಪ್ಪಿಗೆ ನೀಡಿದೆ ಎಂದರು.
ಸುಮಾರು 311 ಕೋಟಿ ವೆಚ್ಚದಲ್ಲಿ 1 ಲಕ್ಷ 9 ಸಾವಿರ 916 ಮಕ್ಕಳಿಗೆ ಸರ್ಕಾರದ ವತಿಯಿಂದಲೇ ಮಕ್ಕಳಿಗೆ ಲ್ಯಾಪ್ ಟಾಪ್ ನೀಡುವ ವಿಚಾರಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಈಗಾಗಲೇ ಟೆಂಡರ್ ಕೂಡ ಕರೆಯಲಾಗಿದೆ ಎಂದು ತಿಳಿಸಿದರು.