ಜಾರ್ಖಂಡ್,ಜೂ14(Daijiworldnews/AZM):ಜಾರ್ಖಂಡ್ ನ ಸರೈಕಲಾದಲ್ಲಿ ನಡೆದ ನಕ್ಸಲ್ ದಾಳಿಗೆ ಐವರು ಪೊಲೀಸರು ಮೃತಪಟ್ಟ ಘಟನೆ ನಡೆದಿದೆ.
ಸರೈಕೆಲಾ ಜಿಲ್ಲೆಯಲ್ಲಿ ಕೂಂಬಿಂಗ್ ನಡೆಸುತ್ತಿದ್ದ ಪೊಲೀಸರ ಮೇಲೆ ಏಕಾಏಕಿ ನಕ್ಸಲರು ದಾಳಿ ನಡೆಸಿದ್ದಾರೆ. ಪರಿಣಾಮ ಐವರು ಪೊಲೀಸರು ಮೃತಪಟ್ಟಿದ್ದಾರೆ. ದಾಳಿ ನಡೆಸಿರುವ ನಕ್ಸಲೀಯರು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ಸುತ್ತಲಿನ ಸ್ಥಳವನ್ನು ಸುತ್ತುವರೆದಿರುವ ಪೊಲೀಸರು ನಕ್ಸಲೀಯರಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
ಇನ್ನು ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಿಎಂ ರಘುಬರ್ ದಾಸ್, ಹುತಾತ್ಮ ಪೊಲೀಸರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.