ಬೆಂಗಳೂರು,ಮಾ.10 (DaijiworldNews/AK): ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಚಿವರಿಬ್ಬರ ಕೈವಾಡವಿದೆ ಎಂದು ಬಿಜೆಪಿ ಬಾಂಬ್ ಸಿಡಿಸಿದ್ದು, ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಈ ನಡುವೆ ಡಿಆರ್ಐ ಅಧಿಕಾರಿಗಳಿಂದ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಎಂಬುವವರನ್ನು ಬಂಧಿಸಿದ್ದಾರೆ.ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು.
ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು.
ರನ್ಯಾ ರಾವ್ ಚಿನ್ನದ ಸ್ಮಗ್ಲಿಂಗ್ ಬಗ್ಗೆ ಡಿಆರ್ಐ ಕೋರ್ಟ್ಗೆ ಇಂಚಿಂಚಾಗಿ ಮಾಹಿತಿ ನೀಡಿದೆ. ಬರೋಬ್ಬರಿ 12 ಕೋಟಿ 56 ಲಕ್ಷ ರೂ. ಮೌಲ್ಯದ ಚಿನ್ನ ಸ್ಮಗ್ಲಿಂಗ್ ಆಗಿದ್ದು, ಸ್ಮಗ್ಲಿಂಗ್ ಕೇಸ್ನಲ್ಲಿ ರನ್ಯಾ ಪ್ರಮುಖ ಪಾತ್ರಧಾರಿ ಎಂದು ಉಲ್ಲೇಖ ಮಾಡಲಾಗಿದೆ. ಟಿಶ್ಯೂ ಪೇಪರ್ ಆ್ಯಂಡ್ ಬ್ಯಾಂಡೇಜ್ ಬಳಸಿ ಚಿನ್ನ ಸಾಗಾಟ ಮಾಡಿದ್ದಾರೆ. ಚಿನ್ನ ಸಾಗಾಟ ಕೇಸ್ನಲ್ಲಿ ದೊಡ್ಡಮಟ್ಟದಲ್ಲಿ ಸದಸ್ಯರಿರುವ ಮಾಹಿತಿ ಹೊರಬಿದ್ದಿದೆ.