ಬೆಂಗಳೂರು, ಮಾ.15 (DaijiworldNews/AA): ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ 4% ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ಮುಸ್ಲಿಮರಿಗೆ ಮಾತ್ರ ಸೀಮಿತವಾಗಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿಗೆ ಸಂಪುಟ ಒಪ್ಪಿಗೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 4% ಮೀಸಲಾತಿ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಹಿಂದುಳಿದ ವರ್ಗಗಳಿಗೆ ಅನ್ವಯಿಸುತ್ತದೆ ಎಂದರು.
4% ಮೀಸಲಾತಿ ಮುಸ್ಲಿಮರಿಗೆ ಅಂತ ಎಲ್ಲಿದೆ? ಅಲ್ಪ ಸಂಖ್ಯಾತರಿಗೆ ಅಂತ ಇರೋದು. ಅಲ್ಪ ಸಂಖ್ಯಾತರು ಅಂದ್ರೆ ಎಲ್ಲರೂ ಬರ್ತಾರೆ. ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಹಿಂದುಳಿದ ವರ್ಗಗಳಿಗೆ ಈ ಮೀಸಲಾತಿ ಅನ್ವಯಿಸುತ್ತದೆ. ಅವರ ಹಕ್ಕನ್ನು ಅವರಿಗೆ ಕೊಡ್ತಾ ಇದ್ದೇವೆ. ಆದ್ರೆ ಬಿಜೆಪಿಯವರೇ ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.