ಶ್ರೀನಗರ, ಮಾ.17(DaijiworldNews/TA) : ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಸೋಮವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಚಲ್ದಾರಾದ ಕ್ರುಮ್ಹೂರ ಗ್ರಾಮದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಅವರು ಹೇಳಿದರು.
ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್ಕೌಂಟರ್ ಆಗಿ ಬದಲಾಯಿತು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.