ನವದೆಹಲಿ, ,ಮಾ.18 (DaijiworldNews/AK):ಸುಪ್ರೀಂ ಕೋರ್ಟ್ನ ಜಡ್ಜ್ ಆಗಿ ಜೊಯಮಲ್ಯ ಬಾಗ್ಚಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

ಅವರು 2031ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.ಇದಕ್ಕೂ ಮೊದಲು ಕೋಲ್ಕತ್ತಾ ಹೈಕೋರ್ಟ್ನ ನ್ಯಾಯಾಧೀಶರಾಗಿದ್ದ ಜೊಯಮಲ್ಯ ಬಾಗ್ಚಿ ಅವರನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಮಾ.10 ರಂದು ಅನುಮೋದನೆ ನೀಡಿತ್ತು.
ಇಂದು ಸುಪ್ರೀಂ ಕೋರ್ಟ್ ಆವರಣದಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರು ನ್ಯಾಯಾಧೀಶ ಜೊಯಮಲ್ಯ ಬಾಗ್ಚಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
13 ವರ್ಷಗಳಿಗೂ ಹೆಚ್ಚು ಕಾಲ ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿರುವ ಜೊಯಮಲ್ಯ ಬಾಗ್ಚಿ, 2011ರ ಜೂನ್ 27ರಂದು ಕೋಲ್ಕತ್ತಾ ಹೈಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು. ಬಳಿಕ 2021ರ ಜನವರಿ 4ರಂದು ಆಂಧ್ರಪ್ರದೇಶ ಹೈಕೋರ್ಟ್ಗೆ ವರ್ಗಾಯಿಸಲಾಯಿತು. ನಂತರ 2021 ನವೆಂಬರ್ನಲ್ಲಿ ಮತ್ತೆ ಕೋಲ್ಕತ್ತಾ ಹೈಕೋರ್ಟ್ಗೆ ವರ್ಗಾಯಿಸಲಾಗಿತ್ತು.ಈ ಮೂಲಕ ಕೋಲ್ಕತ್ತಾ ಹೈಕೋರ್ಟ್ನ ನ್ಯಾಯಾಧೀಶರೊಬ್ಬರು ಮೊದಲ ಬಾರಿಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ