ರಾಯ್ಪುರ, ಮಾ.20(DaijiworldNews/AK): ಛತ್ತೀಸ್ಗಢದ ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ನಕ್ಸಲ್ ನಿಗ್ರಹ ಪಡೆಯ ಕಾರ್ಯಾಚರಣೆಯಲ್ಲಿ 22 ನಕ್ಸಲರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬಿಜಾಪುರದಲ್ಲಿ ದಾಂತೇವಾಡ ಜಿಲ್ಲೆಯ ಗಡಿಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ 2 ತಂಡಗಳಾಗಿ ಕಾರ್ಯಾಚರಣೆ ಮಾಡಿದಾಗ ಗುಂಡಿನ ಚಕಮಕಿ ನಡೆದಿದೆ.
18 ನಕ್ಸಲರ ಶವಗಳು, ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಂಕೇರ್ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.