ಬೆಂಗಳೂರು,ಜೂ15(Daijiworldnews/AZM) : ಜಿಂದಾಲ್ ಕಂಪನಿಗೆ ಜಮೀನು ಮಾರಾಟ ಮಾಡುವುದನ್ನು ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಮುಂದುವರಿದಿದ್ದು, ಭಾನುವಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದೆ.
ಈ ಕುರಿತು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ, ಅಹೋರಾತ್ರಿ ಧರಣಿ ಶನಿವಾರ ರಾತ್ರಿ ಕೂಡ ಮುಂದುವರೆಯಲಿದೆ. ಭಾನುವಾರ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು,
ಇನ್ನೂ ಸಿಎಂ ಕುಮಾರಸ್ವಾಮಿ ಭರವಸೆ ನೀಡಿದಂತೆ ರೈತರ ಸಾಲ ಮನ್ನಾವನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು ಎಂದು ಬಿಎಸ್ವೈ ಆಗ್ರಹಿಸಿದರು. ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ, ಭಾನುವಾರ ಸಿಎಂ ಕುಮಾರಸ್ವಾಮಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ, ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುವುದನ್ನು ಮುಂದುವರೆಸಿದೆ ಎಂದು ಬಿಎಸ್ವೈ ಕಿಡಿಕಾರಿದರು.