ಸಕಲೇಶಪುರ, ಮಾ.29(DaijiworldNews/AK):ಉಡುಪಿಯಿಂದ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ಕಾರು ಶನಿವಾರ ಸಂಜೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಬಳಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ನಾಲ್ವರು ಪತ್ರಕರ್ತರಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಆಲೂರು ತಾಲ್ಲೂಕಿನ ಪಾಳ್ಯ ಬಳಿಯ ಶ್ರೀ ಶನೀಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪತ್ರಕರ್ತರು ಉಡುಪಿಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಇಟಿವಿ ಭಾರತ್ ವರದಿಗಾರ ಸಂದೀಪ್ ಗಂಭೀರ ಗಾಯಗೊಂಡರೆ, ಪ್ರಜಾ ಟಿವಿ ವರದಿಗಾರರಾದ ಜಯಂತ್, ನಾಗರಾಜ್ ಮತ್ತು ಸುದರ್ಶನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರಿಗೂ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಈ ಘಟನೆ ಸಕಲೇಶಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.