ಬೆಂಗಳೂರು, ಏ. 01(DaijiworldNews/ AK): ರಾಜ್ಯ ಸರ್ಕಾರ ಪ್ರತಿ ಲೀಟರ್ ಡೀಸೆಲ್ ಬೆಲೆಯನ್ನು 2 ರೂ. ಏರಿಕೆ ಮಾಡಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುವ ಜನತೆಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ಶಾಕ್ ನೀಡಿದ್ದುಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.

ಸದ್ಯ ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್ಗೆ 88.93 ರೂ. ದರವಿದೆ. ಈಗ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 2 ರೂ. ಏರಿಕೆ ಮಾಡಿದ್ದರಿಂದ ದರ 90.93 ರೂ.ಗೆ ಏರಿಕೆಯಾಗಲಿದೆ. ಪೆಟ್ರೋಲ್ ಮೇಲೆ ಮಾರಾಟ ತೆರಿಗೆಯನ್ನು ಏರಿಸದ ಕಾರಣ ಪ್ರತಿ ಲೀಟರ್ ಪೆಟ್ರೋಲ್ ದರ 102. 84 ರೂ ಇರಲಿದೆ.
ಸರಕು ಸಾಗಾಣಿ ಮಾಡುವ ವಾಹನಗಳಾದ ಟ್ರಕ್, ಲಾರಿಗಳು ಡೀಸೆಲ್ ಬಳಸುವ ಕಾರಣ ಮುಂದಿನ ದಿನಗಳಲ್ಲಿ ಇದರ ನೇರ ಪರಿಣಾಮ ದಿನ ಬಳಕೆಯ ವಸ್ತುಗಳ ಮೇಲೆ ತಟ್ಟಲಿದೆ.