ಶ್ರೀನಗರ, ಏ.12 (DaijiworldNews/AA): ಇಂದು ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ.

ಕಣಿವೆಯ ಹಲವು ಭಾಗಗಳಲ್ಲಿ ಕಂಪನದ ಅನುಭವ ಉಂಟಾಗಿದೆ. ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾಗಿರುವುದರ ಬಗ್ಗೆ ಈವರೆಗೆ ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಭೂಕಂಪದ ಕೇಂದ್ರ ಬಿಂದು ಪಾಕಿಸ್ತಾನದಲ್ಲಿ ಪತ್ತೆಯಾಗಿದ್ದು, 12 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ. ರಾವಲ್ಪಿಂಡಿಯಿಂದ ವಾಯುವ್ಯಕ್ಕೆ 60 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಪಂಜಾಬ್ನ ಅಟಾಕ್, ಚಕ್ವಾಲ್ ಮತ್ತು ಮಿಯಾನ್ವಾಲಿ ಜಿಲ್ಲೆಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪದ ಅನುಭವವಾಗಿದೆ.