ನವದೆಹಲಿ, ಜೂ 17 (Daijiworld News/SM): ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಸೋಲಿಸಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಲೋಕಸಭೆಯಲ್ಲಿ ಭರ್ಜರಿ ಸ್ವಾಗತ ಕೋರಲಾಗಿದೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಸೋಮವಾರ ಆರಂಭವಾದ ಮಳೆಗಾಲದ ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕರಿಸಿದಾಗ ಭರ್ಜರಿ ಚಪ್ಪಾಳೆಯ ಶ್ಲಾಘನೆ ವ್ಯಕ್ತವಾಯಿತು. ಪ್ರಮಾಣ ವಚನ ಸ್ವೀಕಾರಕ್ಕೆ ಸ್ಮೃತಿ ಇರಾನಿ ಅವರ ಹೆಸರನ್ನು ಕರೆಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗೃಹ ಸಚಿವ
ಸ್ಮೃತಿ ಅವರನ್ನು ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದಾಗ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಇತರೆ ಕೇಂದ್ರ ಸಚಿವರು ಮತ್ತು ಸಂಸದರು ಸೇರಿದಂತೆ ಆಡಳಿತಾರೂಢ ಎನ್ಡಿಎ ಪಕ್ಷದ ಸದಸ್ಯರು ಬೆಂಚನ್ನು ಸುದೀರ್ಘ ಸಮಯ ತಟ್ಟುವ ಮೂಲಕ ಸ್ವಾಗತಿಸಿದರು.
ಹಿಂದಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಸ್ಮೃತಿ ಇರಾನಿ, ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್, ರಾಹುಲ್ ಗಾಂಧಿ ಅವರ ತಾಯಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಸದಸ್ಯರಿಗೆ ಶುಭಾಶಯ ಕೋರಿದರು.