ಬೆಂಗಳೂರು,ಜೂ17(DaijiworldNews/AZM): ರಾಜ್ಯ ಸರಕಾರವು 9 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.
ಬಿಡಿಎ ಆಯುಕ್ತರಾಗಿ ಡಾ.ಎನ್. ಮಂಜುಳಾ ಅವರನ್ನು ವರ್ಗಾವಣೆ ಮಾಡಿದ್ದು, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರ ಹುದ್ದೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಮಹೇಂದ್ರ ಜೈನ್ ಎಸಿಎಸ್, ಇಂಧನ ಇಲಾಖೆ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಬಿ. ಹೆಚ್. ಅನಿಲ್ ಕುಮಾರ್ ಎಸಿಎಸ್ ನಗರಾಭಿವೃದ್ಧಿ ಇಲಾಖೆ, ಆಹಾರ ಇಲಾಖೆ ಹೆಚ್ಚುವರಿ ಹೊಣೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ರಾಕೇಶ್ ಸಿಂಗ್ ಪ್ರಧಾನ ಕಾರ್ಯದರ್ಶಿ ವೈದ್ಯಕೀಯ ಶಿಕ್ಷಣ ಇಲಾಖೆ, ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ನಿರ್ದೇಶಕರು ಐಟಿ-ಬಿಟಿ ಇಲಾಖೆ, ಎಸ್.ಎಸ್ ನಕುಲ್ ಬಳ್ಳಾರಿ ಜಿಲ್ಲಾಧಿಕಾರಿ, ಡಾ.ವಿ. ರಾಮಪ್ರಸಾದ್ ಮನೋಹರ್ ಆಯುಕ್ತರು ಉದ್ಯೋಗ ಮತ್ತು ತರಬೇತಿ ಇಲಾಖೆ, ವೃಷಭೇಂದ್ರ ಮೂರ್ತಿ ಆಯುಕ್ತರು ತೋಟಗಾರಿಕೆ ಇಲಾಖೆ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.