ಬೆಂಗಳೂರು, ಜೂ 18 (Daijiworld News/SM): ಐಎಂಎ ಸಂಸ್ಥೆಯಿಂದ ವಂಚನೆಗೊಳಗಾಗಿರುವವರಿಗೆ ನ್ಯಾಯ ಒದಗಿಸಲಾಗುವುದೆಂದು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಐಎಂಎ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರೇ ಆಗಿರಲಿ, ಎಷ್ಟೇ ದೊಡ್ಡವರಾಗಿದ್ದರೂ ಸರಿ ಅವರನ್ನು ಕ್ಷಮಿಸುವುದಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ವಂಚನೆಗೆ ಒಳಗಾದವರಿಗೆ ಖಂಡಿತವಾಗಿಯೂ ನ್ಯಾಯ ಒದಗಿಸಲಾಗುವುದೆಂದು ಕುಮಾರಸ್ವಾಮಿ ಹೇಳಿದರು. ಐಎಂಎ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರೆ ಅವನನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ವಂಚನೆಗೆ ಒಳಗಾಗಿರುವವರಿಗೆ ನ್ಯಾಯ ಒದಗಿಸಿಯೇ ತೀರುತ್ತೇನೆ ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.