ನವದೆಹಲಿ, ಮೇ. 10 (DaijiworldNews/AA): ಭಾರತ ಮತ್ತು ಪಾಕಿಸ್ತಾನ ಇದೀಗ ಕದನ ವಿರಾಮ ಘೋಷಣೆ ಮಾಡಿದೆ. ಆದರೆ ಈಗಾಗಲೇ ಸಿಂಧೂ ನದಿ ಪಾಕ್ಗೆ ಹೋಗದಂತೆ ಬಂದ್ ಮಾಡಲಾಗಿದೆ. ಅದನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.

ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಪಾಕಿಸ್ತಾನದಿಂದ ಈ ಕರೆ ಬಂದಿದೆ. ಸಿಂಧೂ ಜಲ ಒಪ್ಪಂದವು ಅಮಾನತಿನಲ್ಲಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು, "ಭಾರತೀಯ ಸಮಯ 5 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿನ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಎರಡೂ ಕಡೆಯವರು ನಿಲ್ಲಿಸುವುದಾಗಿ ದೃಢಪಡಿಸಿದ್ದಾರೆ. ಜೊತೆಗೆ ಈ ನಿಯಮವನ್ನು ಜಾರಿಗೆ ತರಲು ಎರಡೂ ಕಡೆಯಿಂದಲೂ ಸೂಚನೆಗಳನ್ನು ನೀಡಲಾಗಿದೆ. ಎರಡೂ ದೇಶಗಳ ನಡುವೆ ಮೇ 12ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಯಲಿದೆ" ಎಂದು ತಿಳಿಸಿದ್ದಾರೆ.
ಇನ್ನೂ ಸಿಂಧೂ ನದಿಯ ನೀರನ್ನು ಭಾರತ ಯಾವುದೇ ಕಾರಣಕ್ಕೆ ಬಿಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ಐದು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಇದೀಗ ಕದನ ವಿರಾಮ ಘೋಷಣೆ ನಂತರ ಎಲ್ಲ ಮುಕ್ತವಾಗುವುದಿಲ್ಲ. ಹಾಗಾಗಿ ಈ ಐದು ನಿರ್ಧಾರಗಳು ಸ್ಥಿರವಾಗಿರುತ್ತದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಸೆಪ್ಟೆಂಬರ್ 19, 1960 ರಂದು ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದ (ಐಡಬ್ಲ್ಯೂಟಿ), ಗಡಿಯಾಚೆಗಿನ ನೀರು ಹಂಚಿಕೆಗೆ ಒಂದು ಪ್ರಮುಖ ಉದಾಹರಣೆ ಎಂದೇ ಹೇಳಬಹುದು. ಒಂಬತ್ತು ವರ್ಷಗಳ ಮಾತುಕತೆಗಳ ನಂತರ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಅಯೂಬ್ ಖಾನ್ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆ ಒಪ್ಪಂದವನ್ನು ಮುರಿತ್ತು. ಇದೀಗ ಅದನ್ನು ಮುಂದುವರಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.