ಶಿವಮೊಗ್ಗ, ಜೂ 19 (Daijiworld News/SM): ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ. ಆದರೆ, ಯಾವುದೇ ನಾಯಕರ ಉದ್ದಟತನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಷನ್ ಬೇಗ್ ಒಬ್ಬ ಅವಕಾಶವಾದಿ ರಾಜಕಾರಣಿಯಾಗಿದ್ದಾರೆ. ಅವರ ಆರೋಪಗಳಲ್ಲಿ ಹುರುಳಿಲ್ಲ. ಬೇಗ್ ಅವರನ್ನು ಪಕ್ಷದಿಂದ ಅಮಾನತು ಮಾಡಿರುವ ಕ್ರಮ ಪ್ರಸ್ತುತ ಎಂದು ಅವರು ಹೇಳಿದರು.
ರೋಷನ್ ಬೇಗ್ ಅವರನ್ನು ಮಂತ್ರಿ ಮಾಡಿದರೆ ಎಲ್ಲವೂ ಸರಿ ಇರುತ್ತಿತ್ತು. ಮಂತ್ರಿ ಮಾಡದೇ ಇರುವುದರಿಂದ ಬೇಗ್ ಪಕ್ಷ ವಿರೋಧಿಯಾಗಿ ನಡೆದುಕೊಂಡಿದ್ದಾರೆ ಎಂದರು. ಸಾಮಾನ್ಯವಾಗಿ ಭಿನ್ನಭಿಪ್ರಾಯ, ಅಸಮಾಧಾನ ಇರುವುದು ಸಾಮಾನ್ಯ ಅವುಗಳನ್ನು ಪಕ್ಶದೊಳಗೆ ಬಗೆಹರಿಸಿಕೊಳ್ಳಬೇಕು. ಬೀದಿಯಲ್ಲಿ ನಿಂತು ಮಾತನಾಡುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಬೇಗ್ ವಿರುದ್ಧ ಕೈಗೊಂಡ ಕ್ರಮ ಉತ್ತಮ ಎಂದು ಅವರು ಹೇಳಿದ್ದಾರೆ.