ನವದೆಹಲಿ,ಜೂ19(DaijiworldNews/AZM): 17ನೇ ಲೋಕಸಭೆಯ ಸ್ಪೀಕರ್ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಪಿಎ ಓಂ ಬಿರ್ಲಾ ಅವರನ್ನು ಲೋಕಸಭೆಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಬೆಂಬಲಿಸಿದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜಸ್ಥಾನದ ಕೋಟ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಸಂಸದರಾಗಿರುವ ಓಂ ಬಿರ್ಲಾ ಅವರು, 17ನೇ ಲೋಕಸಭಾ ಚುನಾವಣೆಯಲ್ಲಿ ಕೋಟಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮನಾರಾಯಣ ಮೀನಾ ಅವರನ್ನು 2.5 ಲಕ್ಷ ಮತಗಳ ಅಂತರದಿಂದ ಪರಾಭವಗೊಳಿಸಿದ್ದರು.
ಲೋಕಸಭೆ ಸ್ಪೀಕರ್ ಆಗಿ ಆಯ್ಕೆಗೊಂಡ ಬಿರ್ಲಾ ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದು, ಇದು ಸದನಕ್ಕೆ ಬಹಳ ಹೆಮ್ಮೆಯ ವಿಚಾರವಾಗಿದೆ. ಲೋಕಸಭೆಯ ಸ್ಪೀಕರ್ ಆಗಿ ಸರ್ವಾನುಮತದಿಂದ ಓಂ ಬಿರ್ಲಾ ಅವರಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಅವರಿಗೆ ನಾವು ಅಭಿನಂದಿಸುತ್ತೇವೆ. ಬಹಳಷ್ಟು ಸಂಸದರು ಬಿರ್ಲಾ ಜೀ ಅವರ ಬಗ್ಗೆ ತಿಳಿದಿದ್ದಾರೆ. ರಾಜಸ್ಥಾನದಲ್ಲೂ ಬಿರ್ಲಾ ಅವರು ಸಾಕಷ್ಟು ಸೇವೆ ಸಲ್ಲಿಸಿದ್ದಾರೆ ಎಂದಿದ್ದಾರೆ.