ಬೆಂಗಳೂರು, ಜೂ20(Daijiworld News/SS): ರಾಹುಲ್ ಗಾಂಧಿ ಅವರಿಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಒತ್ತಾಯಿಸಿದ್ದೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧ್ಯಕ್ಷ ಸ್ಥಾನದಲ್ಲಿ ರಾಹುಲ್ ಗಾಂಧಿಯೇ ಮುಂದುವರೆಯುತ್ತಾರೆ. ಅಧ್ಯಕ್ಷ ಸ್ಥಾನಕ್ಕೆ ಅವರೇ ಸೂಕ್ತ. ಹೀಗಾಗಿ ಅವರೇ ಮುಂದುವರೆಯಬೇಕು. ಈ ಬಗ್ಗೆ ಅವರಿಗೆ ಮುಂದುವರಿಯಲು ಒತ್ತಾಯಿಸಿದ್ದೇನೆ ಎಂದು ಹೇಳಿದರು.
ಸಿದ್ದರಾಮಯ್ಯ ಸಲಹೆ ಮೇರೆಗೆ ನಮ್ಮ ಪಕ್ಷದ ಪಾಲಿನ ಒಂದು ಸ್ಥಾನವನ್ನು ಪಕ್ಷೇತರ ಶಾಸಕರಿಗೆ ಬಿಟ್ಡುಕೊಡಲಾಗಿದೆ. ನನ್ನಿಂದ ಸರ್ಕಾರಕ್ಕೆ ಯಾವುದೇ ಅಪಾಯ ಆಗುವುದಿಲ್ಲ. ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗಳಿಗೆ ಸಿದ್ಧವಾಗುವಂತೆ ಹೇಳಿದ್ದೇನೆಯೇ ಹೊರತು ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯುತ್ತದೆ ಅಂತಾ ಹೇಳಿಲ್ಲ ಎಂದು ತಿಳಿಸಿದರು.
ಕಳೆದ ವಿಧಾನಸಭಾ ಚುನಾವಣೆ ವೇಳೆ ನಾನು, ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದೆ. ಆದರೆ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದರು. ಹೀಗಾಗಿ ಮೈತ್ರಿಯಿಂದ ಕಾಂಗ್ರೆಸ್ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂಬ ಮಾತಿಗೆ ಅರ್ಥವಿಲ್ಲ ಎಂದು ಸ್ಪಷ್ಟ ಪಪಡಿಸಿದರು.
ಇದೇ ವೇಳೆ ಒಂದು ದೇಶ ಒಂದು ಚುನಾವಣೆ ಕುರಿತಂತೆ ಮಾತನಾಡಿದ ಅವರು, ಇದರಿಂದ ಸಣ್ಣ ಪಕ್ಷಗಳು ತಪ್ಪು ದಾರಿ ತಪ್ಪುವ ಅಪಾಯ ಇದೆ. ಮೇಲಾಗಿ ಪಕ್ಷಗಳಲ್ಲಿ ದ್ವಂದ್ವ ನಿಲುವು ಇದೆ ಎಂದು ಹೇಳಿದರು.