ನವದೆಹಲಿ, ಜೂ20(Daijiworld News/SS): ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಯುವ ನಿರ್ಧಾರ ಅಚಲ, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಯುವ ನಿರ್ಧಾರ ಅಚಲ. ಆದರೆ, ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಇತ್ತು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ರಾಹುಲ್ ನಿರ್ಧರಿಸಿದ್ದಾರೆ. ರಾಹುಲ್ ಅವರ ಈ ನಿರ್ಧಾರದಿಂದ ಪಕ್ಷದ ಹಿರಿಯ ಮುಖಂಡರು ವಿಚಲಿತರಾಗಿದ್ದಾರೆ. ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯಿಸುತ್ತಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನಿಂದ ಕಂಗೆಟ್ಟರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಈಗ ತಮ್ಮ ಸ್ಥಾನಕ್ಕೆ ಬೇರೊಬ್ಬರನ್ನು ನೇಮ ಮಾಡುವಂತೆ ದುಂಬಾಲು ಬಿದ್ದಿದ್ದಾರೆ. ರಾಹುಲ್ ಗಾಂಧಿ ಮನಸ್ಸು ಬದಲಾವಣೆಗಾಗಿ ಪ್ರವಾಸ ಕೈಗೊಳ್ಳುವಂತೆ ಹಲವು ನಾಯಕರು ಸಲಹೆ ನೀಡಿದ್ದಾರೆ. ಆದರೂ ರಾಹುಲ್ ಗಾಂಧಿ ತಮ್ಮ ನಿರ್ಧಾರ ಬದಲಾಯಿಸುತ್ತಿಲ್ಲ. ಆಪ್ತರ ಪ್ರಕಾರ, ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ರಾಹುಲ್ ಗಾಂಧಿಗೆ ಇಷ್ಟವಿಲ್ಲ ಎಂದು ತಿಳಿದುಬಂದಿದೆ.