ಬೆಳಗಾವಿ, ಮೇ. 29 (DaijiworldNews/AA): ಕೊರೊನಾ ಸೋಂಕಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೋವಿಡ್ ವೈರಸ್ಗೆ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿ ತಾಲೂಕಿನ 70 ವರ್ಷದ ರೋಗಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರೋಗಿಯು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಅವರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ರೋಗಿಗೆ ಬುಧವಾರವಷ್ಟೇ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ರೋಗಿಗೆ ಪಾಸಿಟಿವ್ ಎಂದು ಗೊತ್ತಾದ ಕೂಡಲೇ ರೋಗಿಯನ್ನು ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಅವರು ವಯೋಸಹಜ ಕಾಯಿಲೆಯಿಂದಲೂ ಬಳಲುತ್ತಿದ್ದರು. ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ರೋಗಿಯ ಕುಟುಂಬಸ್ಥರು ಕೋವಿಡ್ ನಿಯಮಾವಳಿಯ ಪ್ರಕಾರ ರಾತ್ರಿಯೇ ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.