ನವದೆಹಲಿ,ಜೂ20(DaijiworldNews/AZM): ಮಹಿಳೆಯರು ಮತ್ತು ಮಕ್ಕಳ ಮೇಲೆ ಉತ್ತರ ಪ್ರದೇಶದಲ್ಲಿ ದೌರ್ಜನ್ಯಗಳು ಜಾಸ್ತಿಯಾಗುತ್ತಿದೆ ಎಂದು ಎಐಸಿಸಿಯ ಪ್ರಧಾನ ಕಾರ್ದರ್ಶಿ ಪ್ರಿಯಾಂಕ ಗಾಂಧಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ಭದ್ರತೆಗೆ ಉತ್ತರ ಪ್ರದೇಶ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಕೂಡಲೇ ಹೊರಬೇಕು ಎಂದೂ ಪ್ರಿಯಾಂಕಾ ಆಗ್ರಹಿಸಿದ್ದಾರೆ.
'ನರಭಕ್ಷಕರು ಅಮಾಯಕರನ್ನು ಕಿತ್ತು ತಿನ್ನುವ ಪರಿಸ್ಥಿತಿ ಉತ್ತರ ಪ್ರದೇಶದಲ್ಲಿ ಸೃಷ್ಟಿಯಾಗಿದೆ. ಮಹಿಳೆಯರು ಭಯದ ವಾತಾವರಣಕ್ಕೆ ದೂಡಲ್ಪಟ್ಟಿದ್ದಾರೆ. ಮಾನವರನ್ನು ಜೀವಂತವಾಗಿ ಸುಡಲಾಗುತ್ತಿದೆ. ಆದರೆ, ಸರ್ಕಾರ ಅತ್ತ ನೋಡುತ್ತಲೇ ಇಲ್ಲ. ಮಹಿಳೆಯರು ಮತ್ತು ಮಕ್ಕಳ ಭದ್ರತೆಯ ಜವಾಬ್ದಾರಿಯನ್ನು ಸರ್ಕಾರ ಯಾವಾಗ ಹೊರಲಿದೆ?' ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.