ಬೆಂಗಳೂರು,ಜೂ20(DaijiworldNews/AZM): ಐದು ಸುಸಜ್ಜಿತ ಶಸ್ತ್ರಚಿಕಿತ್ಸಾ ಕೊಠಡಿಗಳನ್ನುಪ್ರತಿಷ್ಟಿತ ಸಂಸ್ಥೆ ಇನ್ಫೋಸಿಸ್ ನಿರ್ಮಿಸಿಕೊಟ್ಟ ಹಿನ್ನಲೆ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ಸಮಾಜ ಸುಧಾರಕಿ ಡಾ. ಸುಧಾಮೂರ್ತಿ ಅವರನ್ನು ಇಂದು ಅಭಿನಂದಿಸಿದ್ದಾರೆ.
ಕಿದ್ವಾಯಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಈ ಕುರಿತು ಇಂದು ಮಾತನಾಡಿದ ಸಿಎಂ ಕುಮಾರಸ್ವಾಮಿ, ಜಯದೇವ, ಇಂದಿರಾಗಾಂಧಿ, ಸಂಜಯ್ ಗಾಂಧಿ ಆಸ್ಪತ್ರೆಗಳು ಉತ್ತಮ ರೀತಿ ಕೆಲಸ ಮಾಡುತ್ತಿವೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಮೈತ್ರಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಇನ್ಫೋಸಿಸ್ ಐದು ಸುಸಜ್ಜಿತ ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ನಿರ್ಮಿಸಿಕೊಟ್ಟು ರೋಗಿಗಳಿಗೆ ನೆರವಾಗಿದೆ. ಡಾ. ಸುಧಾಮೂರ್ತಿ ಅವರು ಈ ಮೂಲಕ ರೋಗಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.