ಬೆಂಗಳೂರು, ಜೂ 20 (Daijiworld News/SM): ರಾಜ್ಯದಲ್ಲಿರುವ ವೈದ್ಯರುಗಳಿಗೆ ಸೂಕ್ತ ಭದ್ರತೆ ಒದಗಿಸಲು ಸರ್ಕಾರ ಬದ್ಧವಾಗಿದೆ. ಅಗತ್ಯಬಿದ್ದರೆ ಕಾನೂನಿನಲ್ಲಿ ಅಗತ್ಯ ಬದಲಾವಣೆ ತರಲು ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವೈದ್ಯರ ರಕ್ಷಣೆಗೆ ಈಗಾಗಲೇ ರಾಜ್ಯದಲ್ಲಿ ಕಾನೂನು ರಚನೆಯಾಗಿದೆ. ಅದರಂತೆ ವ್ಯದ್ಯರ ಮೇಲೆ ಯಾರೇ ಹಲ್ಲೆ ನಡೆಸಿದರೂ ಅವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ, ಜಾಮೀನು ರಹಿತ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಲಾಗುತ್ತದೆ. ಆದರೆ, ಇದನ್ನು ಮತ್ತಷ್ಟು ಬಲವರ್ದನೆ ಮಾಡಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.
ಅಲ್ಲದೆ, ಈ ಕಾನೂನಿಗೆ ಸಂಬಂಧಿಸಿದ ಸುತ್ತೋಲೆಯನ್ನು ಕೂಡ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲಾಗುವುದು. ಹಾಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.