ಬೆಂಗಳೂರು, ಜೂ.02 (DaijiworldNews/AK): ತಮಿಳಿಂದ ಕನ್ನಡ ಹುಟ್ಟಿದೆ ಅಂತ ಹೇಳಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ಮೇಲೆ ಬ್ಯಾನ್ ಆಗುವ ಹಂತದಲ್ಲಿದೆ.

ಸದ್ಯ ಈ ವಿಚಾರವಾಗಿ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳಿಂದ ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದು, ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡದಿರಲು ಮನವಿ ಮಾಡಿದ್ದಾರೆ. ಈ ವೇಳೆ ರಾಜ್ಯ ಸರ್ಕಾರ ಕಾನೂನಾತ್ಮಕವಾಗಿ ಸಹಕಾರ ನೀಡುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ.
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಜೂನ್ 5ಕ್ಕೆ ಎಲ್ಲೆಡೆ ರಿಲೀಸ್ ಆಗುತ್ತಿದೆ. ಆದರೆ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ಗೆ ಭಾರೀ ವಿರೋಧ ವ್ಯಕ್ತವಾಗಿದೆ. ಸದ್ಯ ಕಾನೂನಿನಲ್ಲಿ ಸಿನಿಮಾ ನಿಷೇಧಿಸಲು ಅವಕಾಶ ಇಲ್ಲದಿರುವ ಹಿನ್ನೆಲೆ ಚಲನಚಿತ್ರ ವಾಣಿಜ್ಯ ಮಂಡಳಿ ರಾಜ್ಯ ಸರ್ಕಾರದ ಬೆಂಬಲ ಕೋರಿದೆ.