ಬೆಂಗಳೂರು, ಜೂ21(Daijiworld News/SS): ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಅದನ್ನು ಬೀಳಿಸುವ ಯತ್ನ ಮಾಡುತ್ತಲೇ ಬಂದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸರ್ಕಾರ ಎಷ್ಟು ದಿನ ಇರುತ್ತದೆ ಎಂಬುದು ನನಗೆ ಗೊತ್ತಿಲ್ಲ. ಕಳೆದ ಎರಡು ತಿಂಗಳುಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಅನಿವಾರ್ಯ ಎನ್ನಿಸುತ್ತಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಸಮ್ಮಿಶ್ರ ಸರ್ಕಾರ ಸದೃಢವಾಗಿದೆ ಮತ್ತು ಸುಭದ್ರವಾಗಿದೆ. ದೇವೇಗೌಡರು ನೀಡಿದ ಹೇಳಿಕೆ ಅವರ ವೈಯಕ್ತಿಕವಾದುದು. ಈ ಬಗ್ಗೆ ನಾನು ಏನೂ ಹೇಳುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಅದನ್ನು ಬೀಳಿಸುವ ಯತ್ನ ಮಾಡುತ್ತಲೇ ಬಂದಿದ್ದಾರೆ. ಬಿ.ಎಸ್ ಯಡಿಯೂರಪ್ಪನವರು ತಾವು ಸರ್ಕಾರ ಬೀಳುವ ಪ್ರಯತ್ನ ಮಾಡುವುದಿಲ್ಲ ಎಂದಿದ್ದರು. ಅವರಿಗೂ ಗೊತ್ತಾಗಿದೆ ನಮ್ಮ ಸರ್ಕಾರ ಸುಭದ್ರವಾಗಿದೆ ಎಂಬುದು ಎಂದು ತಿಳಿಸಿದರು.