ದಾವಣಗೆರೆ,ಜೂ. 16. (DaijiworldNews/ AK) : ಸಿಎಂ ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ದಾವಣಗೆರೆ ಜಿಲ್ಲೆಯ 1350 ಕೋಟಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ 1350 ಕೋಟಿ ವಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
56 ಇಂಚಿನ ಎದೆಯ ಪ್ರಧಾನಿ ಮೋದಿಯವರು useless ಆಗಿದ್ದಾರೆ. ಎದೆ ಎಷ್ಟು ಇಂಚು ಎನ್ನುವುದು ಮುಖ್ಯವಲ್ಲ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲವಾಗಿದೆ ಎಂದು ಟೀಕಿದಿದರು.
ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ 1350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು.
ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, "ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ" ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.
ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ಅನ್ಯಾಯ ಆಯಿತು. 11500 ಕೋಟಿ ರೂಪಾಯಿ 15 ನೇ ಆಯೋಗದಿಂದ ಅನ್ಯಾಯವಾಯಿತು. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5000 ಕೋಟಿಯಲ್ಲಿ ಒಂದು ರೂಪಾಯಿಯನ್ನೂ ನೀಡಲಿಲ್ಲ ಎಂದು ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡಿದ ದ್ರೋಹ ಮತ್ತು ಅನ್ಯಾಯಗಳನ್ನು ಪಟ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ: ಸಿಎಂ
ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಸವಾಲು ಹಾಕಿದರು.
ಅಶೋಕ್- ವಿಜಯೇಂದ್ರ ಸಾರ್ವಜನಿಕ ಚರ್ಚಗೆ ಬನ್ನಿ
ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.