ಕಾರವಾರ, ಜೂ. 16 (DaijiworldNews/AA): ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಕುಮಟಾ, ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಈ 8 ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಿಸಿ ಡಿಸಿ ಆದೇಶಿಸಿದ್ದಾರೆ.