ತ್ರಿಶೂರ್, ಜೂ25(Daijiworld News/SS): ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟರ್ ಅಂಟಿಸಲಾಗಿದ್ದು, ಈ ಪೋಸ್ಟರ್ ಭಕ್ತರ ವಿರೋಧಕ್ಕೆ ಕಾರಣವಾಗಿದೆ.
ತ್ರಿಶೂರ್ನ ಕೇರಳವರಮ್ ಕಾಲೇಜಿನ ಕ್ಯಾಂಪಸ್ನಲ್ಲಿ ಈ ಪೋಸ್ಟರ್ ಅಂಟಿಸಲಾಗಿದ್ದು, ಚಿತ್ರದಲ್ಲಿ ಮಹಿಳೆಯೊಬ್ಬಳು ಅಯ್ಯಪ್ಪ ಸ್ವಾಮಿಗೆ ಜನ್ಮ ನೀಡುತ್ತಿರುವಂತೆ ಚಿತ್ರಿಸಲಾಗಿದೆ. ಅಲ್ಲದೇ ಅದರಲ್ಲಿ ರಕ್ತವನ್ನು ತೋರಿಸಲಾಗಿದ್ದು, ಹಿಂದುಗಳು ಹಾಗೂ ಅಯ್ಯಪ್ಪ ಭಕ್ತರ ಭಾವನೆಗಳಿಗೆ ಧಕ್ಕೆ ತರಲು ಕೆಲ ಕಿಡಿಗೇಡಿಗಳು ಈ ರೀತಿಯ ಪೋಸ್ಟರ್ ಅಂಟಿಸಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂಲಗಳ ಪ್ರಕಾರ, ತ್ರಿಶೂರ್ನ ಕೇರಳವರಮ್ ಕಾಲೇಜಿನ ಕ್ಯಾಂಪಸ್ನಲ್ಲಿ ಎಡಪಂಥಿ ಸಂಘಟನೆ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾದ (ಎಸ್ಎಫ್ಐ) ಕಾರ್ಯಕರ್ತರು ಈ ಪೋಸ್ಟರ್ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಈಗಾಗಲೇ ಪೋಸ್ಟರ್ ಅಂಟಿಸಿರುವ ಕಿಡಿಗೇಡಿಗಳ ವಿರುದ್ಧ ಬಿಜೆಪಿ ದೂರು ನೀಡಿದ್ದು, ಪೊಲೀಸರು ವಿವಾದಿತ ಪೋಸ್ಟರ್ ತೆರವುಗೊಳಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.