ಬೆಂಗಳೂರು,ಜೂ26(DaijiworldNews/AZM): ಜಿಂದಾಲ್ ಕಂಪೆನಿ ಬಗ್ಗೆ ಎದ್ದಿರುವ ವಿವಾದವನ್ನು ಬಗೆಹರಿಸುವ ಹಿನ್ನಲೆ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಜಿಂದಾಲ್ ಕಂಪೆನಿಯ 3363 ಎಕರೆ ಭೂಮಿ ಪರಭಾರೆ ಸಂಬಂಧಪಟ್ಟಂತೆ ಎದ್ದಿರುವ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿಯನ್ನು ರಚಿಸಿದೆ.
ಮಾಜಿ ಸಚಿವ ಎಚ್.ಕೆ.ಪಾಟೀಲ್, ಶಾಸಕ ಆನಂದ್ಸಿಂಗ್ , ಬಿಜೆಪಿ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವಾರು ನಾಯಕರು ಜಿಂದಾಲ್ಗೆ ಭೂಮಿ ಮಾರಾಟ ಮಾಡುವುದನ್ನು ವಿರೋಧಿಸಿತ್ತು. ಹಲವಾರು ಪ್ರತಿಭಟನೆಗಳು ಕೂಡ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಉಪ ಸಮಿತಿ ರಚಿಸುವ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.