ಬೆಂಗಳೂರು, ಆ. 16 (DaijiworldNews/AK): ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಚಂದ್ರಶೇಖರನಾಥ ಸ್ವಾಮೀಜಿ ಅವರು ತಡರಾತ್ರಿ ವಿಧಿವಶರಾಗಿದ್ದಾರೆ.

ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಶ್ರೀಗಳು ತಡರಾತ್ರಿ 12:01 ಗಂಟೆ ಸುಮಾರಿಗೆ ಭೈರವೈಕ್ಯರಾಗಿದ್ದಾರೆ.
ಸ್ವಾಮೀಜಿಗಳ ಅಂತಿಮ ದರ್ಶನವನ್ನು ಇಂದು (ಶನಿವಾರ) ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯರಾದ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.
ಶ್ರೀಗಳ ಉತ್ತರಾಧಿಕಾರಿಗಳಾದ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನ ನೇರವೇರಿಸಲಿದ್ದಾರೆ.