ಬೆಂಗಳೂರು, ಆ. 30 (DaijiworldNews/AK): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಲಾಗಿದೆ.

ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರ ನೇತೃತ್ವದ ವಿಚಾರಣಾ ಆಯೋಗವು ಇಂದು (ಆಗಸ್ಟ್ 30) ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯನವರಿಗೆ ತಮ್ಮ ವರದಿಯನ್ನು ಸಲ್ಲಿಸಿತು. ಇನ್ನು ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8900 ಪುಟಗಳನ್ನು ಹೊಂದಿದೆ. ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಿ ಹಲವು ಲೋಪಗಳು ಕಂಡು ಬಂದಿದ್ದು, ತನಿಖಾ ವರದಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಶಿಫಾರಸು ಮಾಡಿದೆ. ಜೊತೆಗೆ ಸುಧಾರಣಾ ಕ್ರಮ ಕೈಗೊಳ್ಳಲು ಸಹ ಶಿಫಾರಸು ಮಾಡಿದೆ.
ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8900 ಪುಟಗಳನ್ನು ಹೊಂದಿದೆ. ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಿ ಹಲವು ಲೋಪಗಳು ಕಂಡು ಬಂದಿದ್ದು, ತನಿಖಾ ವರದಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಶಿಫಾರಸು ಮಾಡಿದೆ. ಜೊತೆಗೆ ಸುಧಾರಣಾ ಕ್ರಮ ಕೈಗೊಳ್ಳಲು ಸಹ ಶಿಫಾರಸು ಮಾಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ಉಪ ಮುಖ್ಯಮಂತ್ರಿಗಳು 2023 ರಲ್ಲಿ ಟಿಪ್ಪಣಿ ಮೂಲಕ ಮುಖ್ಯಮಂತ್ರಿಗಳಿಗೆ ಕೋರಿದ್ದರು.
2023 ರ ಆಗಸ್ಟ್ 5 ರಂದು ತಜ್ಞರನ್ನೊಳಗೊಂಡ ನಾಲ್ಕು ವಿಶೇಷ ತನಿಖಾ ಸಮಿತಿಗಳನ್ನು ರಚಿಸಿ ಪರಿಪೂರ್ಣ ತನಿಖಾ ವರದಿಯನ್ನು ಸಲ್ಲಿಸಲು ಸೂಚಿಸಲಾಗಿತ್ತು.