ಶ್ರೀನಗರ, ಜೂ28(Daijiworld News/SS): ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಹೆಚ್ಚಾಗಿದ್ದು, ಇಂದು ಸೇನಾಪಡೆಗಳ ಗುಂಡಿಗೆ ಓರ್ವ ಉಗ್ರ ಹತನಾಗಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಬದಗಾಮ್ ಜಿಲ್ಲೆಯ ಕ್ರಾಲ್ ಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನಾಪಡೆಗಳು ಕೂಡಲೇ ಅಲ್ಲಿಗೆ ಧಾವಿಸಿವೆ. ಸೇನೆ ಪ್ರದೇಶವನ್ನು ಸುತ್ತುವರೆಯುತ್ತಿದ್ದಂತೆಯೇ ಸೈನಿಕರತ್ತ ಉಗ್ರರು ಗುಂಡಿನ ಸುರಿಮಳೆಗರೆದಿದ್ದಾರೆ. ಈ ವೇಳೆ ಸೈನಿಕರೂ ಕೂಡ ಪ್ರತಿದಾಳಿ ಮಾಡಿದ್ದು, ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಬದಗಾಮ್ ಜಿಲ್ಲೆಯ ಕ್ರಾಲ್ ಪೋರಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಮಾಹಿತಿ ಇದ್ದು, ಅವಿತಿರುವ ಉಗ್ರರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.