ನವದೆಹಲಿ, ಜೂ 28 (Daijiworld News/MSP): ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಚುನಾವಣಾ ಆಯೋಗ ವರ್ಷಾಂತ್ಯಕ್ಕೆ ಚುನಾವಣೆ ನಡೆಸಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜುಲೈ 3ರಿಂದ ಮತ್ತೆ ಆರು ತಿಂಗಳ ಕಾಲ ವಿಸ್ತರಿಸುವ ಪ್ರಸ್ತಾವವನ್ನು ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಿ ಮಾತನಾಡಿದರು.
ರಮ್ಜಾನ್ ಹಾಗೂ ಅಮರನಾಥ ಯಾತ್ರೆ ಮುಂದಿನ ತಿಂಗಳು ಇರುವುದರಿಂದ ರಾಜ್ಯದಲ್ಲಿ ಸದ್ಯಕ್ಕೆ ಚುನಾವಣೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ರಾಷ್ಟ್ರಪತಿ ಆಡಳಿತ ಮುಂದುವರಿಸಲು ನಿರ್ಧರಿಸಲಾಗಿದ್ದು, ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಸಬಹುದು ಎಂದು ಚುನಾವಣಾ ಆಯೋಗ ಯೋಚಿಸಿದೆ ಎಂದು ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರ ರಾಜ್ಯದ ಪರಿಸ್ಥಿತಿಯನ್ನು ಕೇಂದ್ರ ಸರಕಾರ ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು, ಗಡಿ ಪ್ರದೇಶಗಳಲ್ಲಿ ಬಂಕರ್ಗಳ ನಿರ್ಮಾಣ ಕಾರ್ಯ ಯೋಜಿತ ಕಾಲಾವಧಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದರು.