ರಾಜಸ್ಥಾನದ, ಸೆ. 18 (DaijiworldNews/AA): ಯುಪಿಎಸ್ಸಿ ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಲಕ್ಷಾಂತರ ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಯಶಸ್ವಿಯಾಗಲು ಪ್ರಯತ್ನಿಸುತ್ತಾರೆ, ಆದರೆ ಕೆಲವೇ ಕೆಲವು ಮಂದಿ ಮಾತ್ರ ತಮ್ಮ ಕನಸನ್ನು ನನಸು ಮಾಡಿಕೊಳ್ಳುತ್ತಾರೆ. ಹೀಗೆ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪೂರ್ವಾ ಚೌಧರಿ ಯಶೋಗಾಥೆ ಇದು.

ಪೂರ್ವಾ ರಾಜಸ್ಥಾನದವರಾಗಿದ್ದು, ಅವರ ತಂದೆ ಓಂಪ್ರಕಾಶ್ ಅವರು ರಾಜಸ್ಥಾನ ಆಡಳಿತ ಸೇವೆ (ಆರ್ಎಎಸ್) ಅಧಿಕಾರಿಯಾಗಿ ಕೋಟ್ಪುಟ್ಲಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪೂರ್ವಾ ಆರಂಭದಿಂದಲೂ ಉತ್ತಮ ವಿದ್ಯಾರ್ಥಿನಿಯಾಗಿದ್ದರು. ಅವರು ಸೇಂಟ್ ಕ್ಸೇವಿಯರ್ಸ್ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು, ನಂತರ ದೆಹಲಿ ವಿಶ್ವವಿದ್ಯಾಲಯದ ಲೇಡಿ ಶ್ರೀ ರಾಮ್ ಕಾಲೇಜ್ ಫಾರ್ ವುಮೆನ್ನಿಂದ ಪದವಿ ಪಡೆದರು.
ಕಾಲೇಜು ದಿನಗಳಲ್ಲಿ, ಅವರು ತಮ್ಮ ಶೈಕ್ಷಣಿಕ ಸಾಧನೆಗಳಿಗೆ ಮಾತ್ರವಲ್ಲದೆ ತಮ್ಮ ಗಮನಾರ್ಹ ವ್ಯಕ್ತಿತ್ವಕ್ಕೂ ಹೆಸರುವಾಸಿಯಾಗಿದ್ದರು. ಆದರೆ ಅವರಿಗೆ ಯುಪಿಎಸ್ಸಿ ಪರೀಕ್ಷೆ ಬರೆಯುವ ಹಂಬಲವಿತ್ತು. ಈ ಹಿನ್ನೆಲೆ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ಆರಂಭಿಸಿದರು.
2024ರಲ್ಲಿ ಯುಪಿಎಸ್ಸಿ ಪರೀಕ್ಷೆ ಬರೆದ ಪೂರ್ವ ಅವರು, 533ನೇ ರ್ಯಾಂಕ್ ಗಳಿಸಿ ಉತ್ತೀರ್ಣರಾಗುವಲ್ಲಿ ಯಶಸ್ವಿಯಾಗುತ್ತಾರೆ. ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿದ ನಂತರ ಅವರಿಗೆ ಐಪಿಎಸ್ ಕೇಡರ್ ನೀಡಲಾಯಿತು.